ಪುತ್ತೂರು: ‘ಸ್ನೇಹಸಂಗಮ’ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ ರಿ. ಪುತ್ತೂರು ಇದರ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ‘ಸ್ನೇಹೋತ್ಸವ-2022’ ಡಿ.11 ರಂದು ನಟರಾಜ ವೇದಿಕೆಯಲ್ಲಿ ನಡೆಯಲಿದೆ.
ಬೆಳ್ಳಿ ಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಸದಸ್ಯರಿಗೆ ಸಮವಸ್ತ್ರ ವಿತರಣೆ ನಡೆಯಲಿದೆ.
ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ, ಖ್ಯಾತ ಚಲನಚಿತ್ರ ನಟ ಅರವಿಂದ್ ಬೋಳಾರ್, ಪುತ್ತೂರು ನಗರಸಭೆ ಮಾಜಿ ಅಧ್ಯಕ್ಷರಾದ ಜಗದೀಶ್ ನೆಲ್ಲಿಕಟ್ಟೆ ರವರು ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಸದಸ್ಯರಿಗೆ ಸಮವಸ್ತ್ರ ವಿತರಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..



























