ಪುತ್ತೂರು, ಡಿ ೯ : ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮoಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಡಿಸೆಂಬರ್ ೧೭ ರಿಂದ ೧೯ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪವಿತ್ರ ಭಟ್ ಇವರು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈಕೆ ಕುರಿಯ ಗ್ರಾಮದ ಶಂಕರ ನಾರಾಯಣ ಭಟ್ ಮತ್ತು ಗೀತಾಲಕ್ಷಿö್ಮ ದಂಪತಿ ಪುತ್ರಿ.


























