ವಿಟ್ಲ: ಹಳೆ ಬಸ್ ನಿಲ್ದಾಣದಲ್ಲಿ ಟೈಮಿಂಗ್ಸ್ ವಿಚಾರದಲ್ಲಿ ಖಾಸಗಿ ಬಸ್ ಗಳ ಚಾಲಕರು ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿಂತನ್, ಹೊನ್ನಯ್ಯ, ಯತಿರಾಜ್ ಬಂಧಿತರು.

ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿದ್ದ ಮೂವರು ವ್ಯಕ್ತಿಗಳು ಸಾರ್ವಜನಿಕ ಸ್ಥಳವಾದ ಬಸ್ ತಂಗುದಾಣದಲ್ಲಿ ಪರಸ್ಪರ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗವಾಗುವ ರೀತಿಯಲ್ಲಿ ಕಲಹ ನಡೆಸುತ್ತಿರುವುದ್ದನ್ನು ಕಂಡು ಠಾಣೆಗೆ ಮಾಹಿತಿ ನೀಡಿದ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ.
ಈ ಬಗ್ಗೆ ಠಾಣೆಯಲ್ಲಿ ಅ.ಕ್ರ 192/2022 ಕಲಂ: 160 ಬಾಧಂಸಂ ರಂತೆ ಪ್ರಕರಣ ದಾಖಲಾಗಿದೆ.

























