ವಿಟ್ಲ: ಸ್ಕೂಟರ್ ನಲ್ಲಿ ಬಂದ ಖದೀಮನೋರ್ವ ಮಹಿಳೆಯ ಕರಿಮಣಿ ಸರ ಕಿತ್ತುಕೊಂಡು ಪರಾರಿಯಾದ ಘಟನೆ ವಿತ್ತೂರು ಸಮೀಪದ ಸೂರ್ಯ ರಸ್ತೆಯಲ್ಲಿ ನಡೆದಿದೆ.
ಸ್ಕೂಟರ್ ನಲ್ಲಿ ಬಂದ ಖದೀಮ ಪುತ್ತೂರಿನಿಂದ ಬಸ್ ನಲ್ಲಿ ಬಂದು ಮಿತ್ತೂರಿನಲ್ಲಿ ಇಳಿದು ಕೋಲ್ಪೆ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಖದೀಮನ ಪತ್ತೆಗಾಗಿ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಕರಿಮಣಿ ಸರ ಕಿತ್ತುಕೊಂಡು ಪರಾರಿಯಾದ ಯುವಕ ಬಿಳಿ ಬಣ್ಣದ ಸ್ಕೂಟರ್ ನಲ್ಲಿ ಕಂದು ಬಣ್ಣದ ಟೀ ಶರ್ಟ್ ಧರಿಸಿದ್ದು, ಸರ ಕಳವುಗೈದು ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ..



























