ಪುತ್ತೂರು: ಶಾಸಕರು, ಸಂಸದರು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಆರೋಪದ ಮೇಲೆ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಬೆಂಬಲಿತ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ರವರು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಆಡಿಯೋದಲ್ಲಿ ಶಾಸಕರು, ಸಂಸದರು ಮತ್ತು ಬಿಜೆಪಿ ಮುಖಂಡರ ಬಗ್ಗೆ ವಿರುದ್ಧವಾಗಿ ಮತ್ತು ಕೀಳಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ..
‘ಹಲವು ಬಿಜೆಪಿ ಮುಖಂಡರ, ಕಾಂಗ್ರೆಸ್ ಮುಖಂಡರ ಹೆಸರುಗಳನ್ನು ಆಡಿಯೋದಲ್ಲಿ ಪ್ರಸ್ತಾಪಿಸಲಾಗಿದ್ದು, ಪುತ್ತೂರು ಶಾಸಕರನ್ನು ಸಂಸದರು ಯಾವುದೇ ಕೆಲಸ ಮಾಡದ ರೀತಿ ಹಿಡಿದಿಟ್ಟಿದ್ದಾರೆ’ ಎಂದು ಹೇಳಲಾಗಿದೆ. ಈ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ…