ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ದ್ವಿಗುಣ ಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈವರೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರು 2 ಸಾವಿರ ರೂ ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವ ಧನ ನೀಡಲಾಗುತ್ತಿತ್ತು. ಇದೀಗ ಅಧ್ಯಕ್ಷರಿಗೆ 6 ಸಾವಿರ ರೂ., ಉಪಾಧ್ಯಕ್ಷ ರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ..