ಪುತ್ತೂರು: ಯುವಕನೋರ್ವ ಪರಿಚಯಸ್ಥ ಯುವತಿಯೊಬ್ಬಳನ್ನು ಮದುವೆಯಾಗಬೇಕೆಂದು ಒತ್ತಾಯಿಸಿ ಮಾನಭಂಗ ಮಾಡಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಇಡ್ಕಿದು ಗ್ರಾಮದ ಸೂರ್ಯ ಕೆಂರ್ದೆಲ್ ನಿವಾಸಿ ಸದಾಶಿವ (32) ಎಂಬಾತ ಪರಿಚಯಸ್ಥ ಯುವತಿಯಲ್ಲಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಲ್ಲದೆ, ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದಾಗ ಆಕೆಯ ಮಾನಭಂಗ ಮಾಡಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಲಾಗಿದೆ.
ಯುವತಿ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

























