ಪುತ್ತೂರು: ಗ್ರಾಮ ಸಭೆಗೆ ಬಹುತೇಕ ಅಧಿಕಾರಿಗಳು ಗೈರಾದ ಹಿನ್ನೆಲೆ ನಾಗರೀಕರ ಒತ್ತಾಯದ ಮೇರೆಗೆ ಗ್ರಾಮ ಸಭೆಯನ್ನು ಮುಂದೂಡಿಕೆ ಮಾಡಿದ ಘಟನೆ ನೆಟ್ಟಣಿಗೆ ಮುಡ್ನೂರಿನಲ್ಲಿ ನಡೆದಿದೆ.
ನೆಟ್ಟಣಿಗೆ ಮುಡ್ನೂರಿನಲ್ಲಿ ಗ್ರಾಮಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಬಹುತೇಕ ಅಧಿಕಾರಿಗಳು ಹಾಜರಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ ಅಸಮಾಧಾನಗೊಂಡ ನಾಗರೀಕರು ಗ್ರಾಮಸಭೆಯನ್ನು ಬಹಿಷ್ಕರಿಸುವಂತೆ ಒತ್ತಾಯಿಸಿದ್ದು, ನಾಗರೀಕರ ಒತ್ತಾಯ ಹಿನ್ನೆಲೆ ಗ್ರಾಮ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ಗೈರು ಹಾಜರಾಗುವ ಮೂಲಕ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸಾರ್ವಜನಿಕ ಆಗ್ರಹಿಸಿದ್ದಾರೆ..
























