ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ಹೊಂಡದಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆಯಾಗಿದೆ.
ಮೃತರನ್ನು ಪುಣಚ ಗ್ರಾಮದ ಕೆದುಮೂಲೆ ದಿ.ವೀರಪ್ಪ ನಾಯ್ಕ್ ರವರ ಪುತ್ರ ಕಮಲಾಕ್ಷ (28) ಎಂದು ಅವರ ಮನೆಯವರು ಗುರುತು ಪತ್ತೆ ಹಚ್ಚಿದ್ದಾರೆ.
ಮನೆಯಿಂದ ಕೆಲಸಕ್ಕೆಂದು ತೆರಳಿದರೆ ಹಲವು ದಿನಗಳ ವರೆಗೆ ಕಮಲಾಕ್ಷ ಮರಳಿ ಮನೆಗೆ ಬರುತ್ತಿರಲಿಲ್ಲ. ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದ ಕಮಲಾಕ್ಷ ಮತ್ತೆ ಕೆಲಸಕ್ಕೆ ತೆರಳಿದ್ದರು ಎಂದು ಮನೆಯವರು ಮಾಹಿತಿ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೊಪ್ಪು, ಸೌದೆ ತರಲು ಗುಡ್ಡಕ್ಕೆ ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ಒಂದು ಮೊಬೈಲ್ ಫೋನ್ ಹಾಗೂ ಬ್ಯಾಗ್ ಕಂಡು ಬಂದಿತ್ತು. ಅಲ್ಲಿಂದ ಅಲ್ಪ ದೂರದಲ್ಲಿ ವ್ಯಕ್ತಿಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರವೊಂದರಲ್ಲಿ ಹಗ್ಗವೊಂದು ನೇತಾಡುತ್ತಿರುವುದು ಕಂಡು ಬಂದಿದ್ದು ವಿಟ್ಲ ಠಾಣಾ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು.
ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಪತ್ತೆಯಾಗಿರುವ ಮೃತದೇಹ ಪುಣಚ ಗ್ರಾಮದ ಕೆದುಮೂಲೆ ದಿ.ವೀರಪ್ಪ ನಾಯ್ಕ ರವರ ಪುತ್ರ ಕಮಲಾಕ್ಷ ಎಂಬವರದ್ದೆಂದು ತಿಳಿದು ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

























