ಮಂಗಳೂರು: ಸುರತ್ಕಲ್ ನ ಕೃಷ್ಣಾಪುರ ಐದನೇ ಬ್ಲಾಕ್ ನ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4-5 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆ ಸಂಬಂಧ 4-5 ಮಂದಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದ್ದು,ಇದರಲ್ಲಿ ಇಬ್ಬರು ಮಹಿಳೆಯರನ್ನು ಕೂಡ ವಿಚಾರಣೆಗೊಳಪಡಿಸಿ ಅವರಿಂದ ಕೆಲ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಶನಿವಾರ ರಾತ್ರಿ ದುಷ್ಕರ್ಮಿಗಳಿಬ್ಬರು ಜಲೀಲ್ ರನ್ನು ಚಾಕುವಿನಿಂದ ಇರಿದಿದ್ದರು. ಆಸ್ಪತ್ರೆಯಲ್ಲಿ ಜಲೀಲ್ ಮೃತಪಟ್ಟಿದ್ದರು. ರಾತ್ರಿ 8.30ರ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಯುವಕರು ಅಂಗಡಿಗೆ ಬಂದಿದ್ದರು. ಓರ್ವ ಮಾಸ್ಕ್ ಧರಿಸಿದ್ದು, ಇನ್ನೋರ್ವ ಟವೆಲನ್ನು ಮುಖಕ್ಕೆ ಕಟ್ಟಿಕೊಂಡಿದ್ದ ಎನ್ನಲಾಗಿದೆ. ಕೃತ್ಯ ನಡೆಸಿ ದೂರದಲ್ಲಿ ನಿಲ್ಲಿಸಿದ್ದ ಬೈಕಿನಲ್ಲಿ ಪರಾರಿಯಾಗಿದ್ದರು..
























