ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ವಿದ್ಯಾರ್ಥಿ ನಿಖಿಲ್. ಬಿ. ಕೆ. ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬಿಜಾಪುರದಲ್ಲಿ ನಡೆಸಿದ
ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್ ಸಿಂಗಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಟ್ರಡಿಷನಲ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಗದಗದಲ್ಲಿ ನಡೆಯುವ ವಿಶೇಷ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದು 26/12 2022 ರಿಂದ 30/12/22 ರವರೆಗೆ ಮಹಾರಾಷ್ಟ್ರದ ಸಂಗಮ್ ನೇರ್ ನಲ್ಲಿ ನಡೆಯುವ 3ನೇ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿ 1/01/2023 ರಿಂದ 2/1/2023ರವರೆಗೆ ನಡೆಯುವ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ಇವರು ಸಾಂದೀಪನಿ ವಿದ್ಯಾಸಂಸ್ಥೆಯ ಸಹ ಶಿಕ್ಷಕಿ ಪ್ರಮೀಳಾ ರವರ ಪುತ್ರ.
ಯೋಗ ಶಿಕ್ಷಕ ನವೀನ್ ಕುಮಾರ್ ಬಿ. ಕೆಯ್ಯೂರು ತರಬೇತಿ ನೀಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಮಾಲ ವಿ.ಎನ್ ತಿಳಿಸಿದ್ದಾರೆ.























