ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳು, ಕರ್ನಾಟಕ ಸರಕಾರ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಯಲ್ಲಿ ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನುಷ್ ರಾಮ್ ( ದಿನೇಶ್ ಪ್ರಸನ್ನ ಹಾಗೂ ಉಮಾ.ಡಿ. ಪ್ರಸನ್ನ ದಂಪತಿ ಪುತ್ರ) ಸಾಂಸ್ಕೃತಿಕ ರಸಪ್ರಶ್ನೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ
ಗಳಿಸಿದ್ದಾರೆ.

ತಾನು ಕಲಿಯುತ್ತಿರುವ ಶಿಕ್ಷಣ ಸಂಸ್ಥೆ ಹಾಗೂ ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ನ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವ ಸಾಧನೆ ತೋರಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
























