ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಚಾಲಕರ ಸಹಿತ ಬಸ್ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಉಜಿರೆ ಹಾಗೂ ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರವಾಸದ ಬಸ್ನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಹಾಗೂ ನಾಲ್ವರು ಉಪನ್ಯಾಸಕರು ಮತ್ತು ಒಬ್ಬ ಅಡುಗೆ ಸಹಾಯಕರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ..
























