ಉಡುಪಿ: ಪೆರ್ಡೂರು ಗ್ರಾಮದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲೇ ಮಲಗಿದ ಘಟನೆ ನಡೆದಿದೆ.
ಪೆರ್ಡೂರು ಗ್ರಾಮದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಇತ್ತೀಚೆಗೆ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯೇ ಕಂಠಪೂರ್ತಿ ಕುಡಿದು ಜಗಲಿಯಲ್ಲಿ ಮಲಗಿದ್ದರು ಎನ್ನಲಾಗಿದೆ.
ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಗ್ರಾಮಸ್ಥರು, ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ..

























