ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಅಹ್ಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಲು ದೆಹಲಿಯಿಂದ ಅಹಮದಾಬಾದ್ಗೆ ಹೊರಟಿದ್ದಾರೆ. ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ.
ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ..

























