ಪುತ್ತೂರು: ಭಜಕರ, ಹಿಂದೂ ಕಾರ್ಯಕರ್ತರ ವಿರುದ್ಧ ಅವಹೇಳನ ಬರಹವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪ ಹೊತ್ತಿರುವ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ರನ್ನು ಅಮಾನತುಗೊಳಿಸಿ, ಬಂಧಿಸುವಂತೆ ಆಗ್ರಹಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡದ ವತಿಯಿಂದ ಡಿ.29 ರಂದು ಪ್ರತಿಭಟನೆ ನಡೆಯಲಿದೆ.

ಡಿ.29 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.