ವಿಟ್ಲ: ವ್ಯಕ್ತಿಯೋರ್ವರು ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.

ಮೃತರನ್ನು ಕೊಳ್ನಾಡು ಗ್ರಾಮದ ಕಟ್ಟತ್ತಿಲ ನಿವಾಸಿ ವಸಂತ ರೈ(52) ಎಂದು ಗುರುತಿಸಲಾಗಿದೆ.
ವಸಂತ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ..