ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ನಡೆದಿದೆ.
ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಳು.

ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು ಬಾಲಕಿಯನ್ನು ಎಳೆದುಕೊಂಡು ಹೋಗಿದೆ. ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಟ್ಲ-ಕಲ್ಲಡ್ಕ ರಸ್ತೆ ಅಗಲೀಕರಣಗೊಂಡು ಡಾಮರೀಕರಣಗೊಂಡಿದ್ದು, ವಾಹನಗಳು ಮಿತಿಮೀರಿದ ವೇಗದಲ್ಲಿ ಚಲಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.



























