ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್, ಕೊಳ್ನಾಡು ಕಾನಭಜನ ನಿವಾಸಿ ಕಬೀರ್ ಬಂಧಿತರು.
ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ರವರಿಗೆ ಶನಿವಾರ ಬೆಳಗ್ಗೆ ಕೊಳ್ನಾಡು ಗ್ರಾಮದ ಬೊಳ್ಪಾದೆ ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದಾರೆಂಬ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭ ಇಬ್ಬರು ಆರೋಪಿಗಳು ಅಮಲಿನಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ.
ತಕ್ಷಣ ಇವರನ್ನು ವಶಕ್ಕೆ ಪಡೆದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಕಳುಹಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಹೇಮರಾಜ್, ಜಟ್ಟಪ್ಪ, ವಿನೋದ್ ಹಾಗೂ ಇಲಾಖಾ ಜೀಪ್ ಚಾಲಕ ಅಶೋಕ್ ಪಾಲ್ಗೊಂಡಿದ್ದರು..

























