ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ, ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಹೇಳಿದೆ.
ಕರುಳು ನಿಷ್ಕ್ರಿಯವಾಗಿತ್ತು ಹಾಗೂ ಹಳದಿ ಜ್ವರ ಬಾಧಿಸಿತ್ತು ಎಂದು ವರದಿಯಲ್ಲಿ ತಿಳಿಸಿದೆ. ಹೆಚ್ಚಿನ ತನಿಖೆಗಾಗಿ ಅವರ ಆಂತರಿಕ ಅವಯವಗಳನ್ನು ರಾಸಾಯನಿಕ ತಪಾಸಣೆಗಾಗಿ ಕಳುಹಿಸಲಾಗಿದೆ.
ಇದೇ ವೇಳೆ ಅಂಜುಶ್ರೀ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆಯೆಂದೂ ವರದಿಯಲ್ಲಿ ಹೇಳಿದೆ. ಆಹಾರದಲ್ಲಿನ ವಿಷ ಅಲ್ಲವೆಂದು ಫಾರೆನ್ಸಿಕ್ ಸರ್ಜನ್ ಅವರ ಅಭಿಪ್ರಾಯವಾಗಿದೆ. ವಿಷ ಕರುಳನ್ನು ನಿಷ್ಕ್ರಿಯಗೊಳಿಸಿದ್ದಾಗಿ ವರದಿಯಲ್ಲಿ ವ್ಯಕ್ತಪಡಿಸಿದೆ.
ಶನಿವಾರ ಬೆಳಗ್ಗೆ ಅಂಜುಶ್ರೀ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಡಿ. 31ರಂದು ಕುಳಿಮಂದಿ ಸೇವಿಸಿದ ಕಾರಣ ಅಸ್ವಸ್ಥ್ಯ ಕಾಣಿಸಿಕೊಂಡಿತ್ತು. ವಿಷಾಹಾರ ಸೇವನೆಯಿಂದ ಸಾವು ಸಂಭವಿಸಿತ್ತೆಂದು ಸಂಶಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಟೇಲ್ ಮಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.




























