ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯೊಳಗೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ನೆರಿಯ ಗ್ರಾಮದ ನೆಕ್ಕರೆ ನಿವಾಸಿ ಗೋಪಾಲ (66) ಸಾವನಪ್ಪಿದ ವ್ಯಕ್ತಿ.
ಗೋಪಾಲ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ರವಿವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮೃತಪಟ್ಟಿದ್ದಾರೆ. ಅವರ ಇಬ್ಬರು ಪುತ್ರರು ಕೆಲಸದ ನಿಮಿತ್ತ ಹೊರ ಹೋಗಿದ್ದು, ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ರಕ್ತದ ನಡುವಿನಲ್ಲಿ ಮೃತದೇಹವಿದ್ದು, ಆರೋಗ್ಯ ಸಮಸ್ಯೆ ಇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ವೈದ್ಯಕೀಯ ತಂಡ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.




























