ಪುತ್ತೂರು : ಶ್ರೀರಾಮ್ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂಪೆನಿ
ಲಿಮಿಟೆಡ್ ಇದರ ಪುತ್ತೂರು ಶಾಖಾ ವತಿಯಿಂದ ಪುತ್ತೂರು ತಾಲೂಕಿನ ಆಯ್ದ ಅರ್ಹ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ ಜ.13 ರಂದು ಬೆಳಿಗ್ಗೆ 10.15ಕ್ಕೆ ಪುತ್ತೂರು ನಗರದ ಟೌನ್ ಬ್ಯಾಂಕ್
ಹಾಲ್‌ನಲ್ಲಿ ನಡೆಯಲಿದೆ.
ಕಂಪೆನಿಯ ಸಂಸ್ಥೆಯ ರೋನಲ್ ಬಿಝಿನೆಸ್ ಹೆಡ್ ಶರಶ್ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ವಿದ್ಯಾರ್ಥಿ ನಿಧಿ ವಿತರಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ನಗರಸಭಾಧ್ಯಕ್ಷ ಜೀವಂಧರ ಜೈನ್, ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ, ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಶಿಕ್ಷ-ರಕ್ಷಕ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ ವಿ, ಸಂಸ್ಥೆಯ ರೋನಲ್ ರಿಕವರಿ ಹೆಡ್ ನಾಗರಾಜ ಬಿ, ಸ್ಟೇಟ್ ಹೆಡ್ ಸದಾಶಿವ ಆರ್ ಬಿ ಎಚ್, ಮಹೇಶ್ ಕುಮಾರ್ ಸಿ ಎಚ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
108 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 3,500/- ರಂತೆ 3.78 ಲಕ್ಷ ರೂಪಾಯಿ ಹಾಗೂ 189 ಮಂದಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಲಾ 3 ಸಾವಿರ ರೂಪಾಯಿಯಂತೆ
5.67 ಲಕ್ಷ ರೂಪಾಯಿ ಸೇರಿ ಒಟ್ಟು 297 ಮಂದಿ ವಿದ್ಯಾರ್ಥಿಗಳಿಗೆ 9.45 ಲಕ್ಷ ರೂಪಾಯಿ ವಿದ್ಯಾರ್ಥಿ ನಿಧಿ ವಿತರಿಸಲಾಗುವುದು ಎಂದು ಸಂಸ್ಥೆಯ ಪುತ್ತೂರು ಶಾಖಾಧಿಕಾರಿ ಜಯಪ್ರಕಾಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




























