ಬಂಟ್ವಾಳ: ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಆದಿತ್ಯವಾರ ವಿಟ್ಲಪಡ್ನೂರು ಮಲರಾಯ ದೈವಸ್ಥಾನದ ಬಳಿ ಪಾದಾಯಾತ್ರೆಯ ಸಭಾ ಕಾರ್ಯಕ್ರಮ ಮುಗಿಸಿ ರಾತ್ರಿ ವಗೆನಾಡು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ತಂಗಿದ್ದರು. ಆದರೇ ಇಂದು ಬೆಳಿಗ್ಗೆ ಪ್ರಚಾರದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಮಾಹಿತಿ ಸಿಗುತ್ತಿದ್ದಂತೆ ಶಾಸಕರು ತಂಗಿದ್ದ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದರು.

ಬೈಕ್ ಸವಾರ ವಿಜಿತ್ ಮೃತಪಟ್ಟ ವಿಚಾರ ತಿಳಿದು ವಿಷಾದ ವ್ಯಕ್ತಪಡಿಸಿದ ಶಾಸಕರು ಆಸ್ಪತ್ರೆಗೆ ಬಂದಿದ್ದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ವಿಜಿತ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ವಿಜಿತ್ ಶವಸಂಸ್ಕಾರಕ್ಕೆ ಸಂಬಂಧಿಸಿದಂತೆ ಶಾಸಕರು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದು, ವಿಜಿತ್ ಅವರ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಬೆಳ್ತಂಗಡಿ ಅವರ ನಿವಾಸಕ್ಕೆ ಕೊಂಡುಹೋಗಲಿದ್ದು, ಅದರ ಸಂಪೂರ್ಣ ಜವಾಬ್ದಾರಿಯನ್ನು ಬಿಜೆಪಿ ಮುಖಂಡ ಮಾದವ ಮಾವೆ, ಪ್ರಣಾಮ್ ಅಜ್ಜಿಬೆಟ್ಟು, ಯಶೋಧರ ಕರ್ಬೆಟ್ಟು, ವಸಂತ ಅಣ್ಣಳಿಕೆ ರವರಿಗೆ ಶಾಸಕರು ವಹಿಸಿದ್ದಾರೆ ಎಂದು ತಿಳಿದು ಬಂದಿದೆ..





























