ಕಡಬ: ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಪೋಸ್ಟ್ ಹಾಕುತ್ತಿದ್ದ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ರನ್ನು ಅಮಾನತುಗೊಳಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಭಜಕರ ಬಗ್ಗೆ ನಿಂದನೆ, ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಡಾಫೆಯಾಗಿ ವರ್ತಿಸಿದ ಕೊಯಿಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ರವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಂಜೀವ ಪೂಜಾರಿ ಹಲವಾರು ಬಾರಿ ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಂಘಟನೆಯವರ ಕೆಂಗಣ್ಣಿಗೆ ಗುರಿಯಾಗಿದ್ದರು.
ತಿಂಗಳುಗಳ ಹಿಂದೆ ಭಜಕರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಸಂಜೀವ ಪೂಜಾರಿ ಯವರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.



























