ಬಂಟ್ವಾಳ: ಮನೆಯೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.

ಮಾಣಿ ಗ್ರಾಮದ ಕಾಪಿಕಾಡು ರಮಾ ಅಶೋಕ ಪೂಜಾರಿ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ..

ರಮಾ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ ಬಿದ್ದಿದ್ದಾರೆ.

ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.


























