ಭಾರತೀಯ ಜೀವ ವಿಮಾ ನಿಗಮ (LIC) ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಈ ನೇಮಕಾತಿ ಅಡಿಯಲ್ಲಿ ಒಟ್ಟು 300 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್ಸೈಟ್ ibpsonline.ibps.in ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ..
ಹುದ್ದೆಗಳ ವಿವರಗಳು:
ಸಹಾಯಕ ಆಡಳಿತಾಧಿಕಾರಿ- 300 ಹುದ್ದೆಗಳು
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 21 ರಿಂದ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ- 700 ರೂ.
- SC/ST/PWD ಅಭ್ಯರ್ಥಿಗಳಿಗೆ- 85 ರೂ.
ಅರ್ಜಿ ಸಲ್ಲಿಸುವುದು ಹೇಗೆ..!??
ಈ ಹುದ್ದೆಗಳಿಗೆ ಲಿಂಕ್ ibpsonline.ibps.in ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಪ್ರಿಲಿಮಿನರಿ ಟೆಸ್ಟ್ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕ:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 31, 2023
- ಪ್ರಿಲಿಮಿನರಿ ಟೆಸ್ಟ್ ದಿನಾಂಕ- ಫೆಬ್ರವರಿ 17, 2023
- ಮುಖ್ಯ ಪರೀಕ್ಷೆ ದಿನಾಂಕ- ಮಾರ್ಚ್ 18, 2023


























