ಉಪ್ಪಿನಂಗಡಿ: ಹಾಡಹಗಲೇ ಪ್ರತ್ಯಕ್ಷಗೊಂಡ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ತಣ್ಣೀರುಪಂಥ ಗ್ರಾಮದ ಅಳಕ್ಕೆಎಂಬಲ್ಲಿ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಹೊತ್ತೊಯ್ದಿದೆ.
ಗಣೇಶ್ ರವರ ಪತ್ನಿ ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಆಗಿದ್ದು, ಅವರು ಕಚೇರಿಗೆ ಹೋಗಿದ್ದರು. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ಅವರು ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಘಟನೆ ಸಂಭವಿಸಿದೆ..

























