ಬಂಟ್ವಾಳ: ಟ್ಯಾಂಕರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಸೂರಿಕುಮೇರ್ ನಲ್ಲಿ ಸಮೀಪ ನಡೆದಿದೆ.
ಸೂರಿಕುಮೇರ್ ಜಂಕ್ಷನ್ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಮಂಗಳೂರಿಗೆ ತೆರಳುತ್ತಿದ್ದ ಬುಲೆಟ್ ಟ್ಯಾಂಕರ್ ಹಾಗೂ ಮಾಣಿ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

























