ಪುತ್ತೂರು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಬಿಜೆಪಿ ಜಿಲ್ಲಾಧ್ಯಕ್ಷ , ವಕೀಲ ಕೆ.ಶ್ರೀಕಾಂತ್ ರವರು ಎ.೨೦ ರಂದು ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಮಾಡಿದರು.
ಚುನಾವಣಾ ಫಲಿತಾಂಶದಲ್ಲಿ ಕಾಸರಗೋಡು ಕ್ಷೇತ್ರದಲ್ಲಿ ವಿಜೇತರಾಗಿ ಕಾಸರಗೋಡು ಸರ್ವಾಂಗಿಣ ಅಭಿವೃದ್ದಿಯಾಗುವಂತೆ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ರಾಮಚಂದ್ರ ಕಾಮತ್, ಶೇಖರ್ ನಾರಾವಿ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕ ವಿ.ಎಸ್ ಭಟ್ ಪ್ರಾರ್ಥನೆ ಮಾಡಿ ಪ್ರಸಾದ ವಿತರಿಸಿದರು.