ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ 1 ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಜನವರಿ ತಿಂಗಳಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಗೆ ರೈತರು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ.
ಈ ರೀತಿ ಮಳೆ ಬಂದ್ರೆ ಭತ್ತ, ಅಡಿಕೆ, ಕಾಫಿ, ಮೆಣಸಿನ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಳೆಯಿಂದ ರೈತರು, ಕೂಲಿ ಕಾರ್ಮಿಕರು, ಬೆಳೆಗಾರರಿಗೆ ಆತಂಕ ಎದುರಾಗಿದೆ. 2022ರ ವರ್ಷ ಪೂರ್ತಿ ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿದಿತ್ತು.
ಇದೀಗ ಜನವರಿ ತಿಂಗಳ ಮಳೆ ಕಂಡು ಮುಂದಿನ ಭವಿಷ್ಯದ ಬಗ್ಗೆ ಬೆಳೆಗಾರರು ಚಿಂತೆ ಮಾಡುವಂತಾಗಿದೆ. ಅಳಿದು ಉಳಿದ ಬೆಳೆಯನ್ನೂ ಉಳಿಸಿಕೊಳ್ಳೋದೆ ಬೆಳೆಗಾರರ ಚಿಂತೆಯಾಗಿದೆ.


























