ಪುತ್ತೂರು: ತೆಂಕಿಲ ಅಂಗನವಾಡಿ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಶಾಸಕರಾದ ಸಂಜೀವ ಮಠಂದೂರು ಹಾಗೂ ನಗರಸಭೆಯ ಅಧ್ಯಕ್ಷರಾದ ಜೀವಂಧರ್ ಜೈನ್ ರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ನಗರ ಸಭೆಯ ಉಪಾಧ್ಯಕ್ಷರಾದ ವಿದ್ಯಾಗೌರಿ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ, ನಗರ ಸಭಾ ವಾರ್ಡ್ ಸದಸ್ಯರಾದ ಯಶೋಧ ಹರೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶ್ರೀಲತಾ ಎಸ್., ಸಹಾಯಕ ಅಭಿವೃದ್ಧಿ ಯೋಜನಾಧಿಕಾರಿ ಭಾರತಿ, ಮೇಲ್ವಿಚಾರಕರಾದ ಜಾಲಜಾಕ್ಷಿ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ರೇವತಿ, ಸದಸ್ಯರಾದ ಅನಿಲ್, ಕಟ್ಟಡ ನಿರ್ಮಾಣಕ್ಕೆ ನಿವೇಶನ ದಾನ ಮಾಡಿರುವಂತಹ ಗೋಪಾಲ ಗೌಡ ಟಿ. ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ಟೌನ್ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರ ರಾವ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಯುವರಾಜ್, ಬಾಲ ವಿಕಾಸ ಸಮಿತಿ, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ಸಹಾಯಕಿ ಮಾಲಿನಿ, ಆಶಾ ಕಾರ್ಯಕರ್ತೆ ವೀಣಾ, ಮಕ್ಕಳು, ಪೋಷಕರು ಹಾಜರಿದ್ದರು.

ಬಪ್ಪಳಿಗೆ ಅಂಗನವಾಡಿ ಕಾರ್ಯಕರ್ತೆ ಸುಮಿತ್ರ ಕಾರ್ಯಕ್ರಮ ನಿರೂಪಿಸಿದರು. ವಾರ್ಡ್ ಸದಸ್ಯರಾದ ಯಶೋಧ ಪೂಜಾರಿ ವಂದನಾರ್ಪಣೆಗೈದರು.






























