ವಿಟ್ಲ ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿದು ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಳ್ನಾಡು ತಾಳಿತ್ತನೂಜಿ ನಿವಾಸಿ ಅಬ್ದುಲ್ ಖಾದರ್ ಬಂಧಿತ ಆರೋಪಿ.

ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ,ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೃತ್ಯಕೆ ಬಳಸಿದ ವಾಹನ ಝೈಲೋ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಪ್ರಕರಣದ ಮುಖ್ಯ ಆರೋಪಿ -ಸೂತ್ರದಾರ ಅಬೂಬಕ್ಕರ್ ಸಿದ್ಧೀಕ್ ತಲೆಮರೆಸಿಕೊಂಡಿದ್ದಾನೆ.

























