ತಮಿಳಿನ ಖ್ಯಾತ ನಟ ರಜನಿಕಾಂತ್ ನಿನ್ನೆ ಬೆಳಗ್ಗೆ ಮಂಗಳೂರಿಗೆ ಬಂದಿಳಿದಿದ್ದಾರೆ.
ರಜನಿಕಾಂತ್ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಭಾಗದ ಚಿತ್ರೀಕರಣಕ್ಕಾಗಿ ಅವರು ತಮ್ಮ ತಂಡದೊಂದಿಗೆ ಕರಾವಳಿಗೆ ಪಾದ ಬೆಳೆಸಿದ್ದಾರೆ. ಕರಾವಳಿಯ ಹಲವು ಭಾಗಗಳಲ್ಲಿ ‘ಜೈಲರ್’ ಸಿನಿಮಾದ ಕೆಲ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.
ಈ ಸನ್ನಿವೇಶದಲ್ಲಿ ನಟ ಶಿವರಾಜ್ ಕುಮಾರ್ ಕೂಡ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದು, ಮಂಗಳೂರಿನಲ್ಲಿ ನಡೆಯುವ ಚಿತ್ರೀಕರಣದಲ್ಲಿ ಈ ಜೋಡಿ ಜೊತೆಯಾಗಿ ಕ್ಯಾಮೆರಾ ಎದುರಿಸಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅಭಿಮಾನಿಗಳ ದಂಡೇ ನಟನನ್ನು ಸುತ್ತುವರೆದಿದೆ. ಹೀಗಾಗಿ ಶೂಟಿಂಗ್ ನಡೆಯುವ ಸ್ಥಳಗಳಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಲಾಗುತ್ತಿದೆ.


























