ಸುಬ್ರಹ್ಮಣ್ಯ : ಕೊರೊನಾ ಎರಡನೇ ಅಲೆಯ ಅಬ್ಬರದಿಂದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.ಎ.21 ರ ರಾತ್ರಿಯಿಂದ ಸರಕಾರದ ಮುಂದಿನ ಆದೇಶದವರೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸರ್ಕಾರದ ಆದೇಶ ಪಾಲನೆಯ ಕಾರಣಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ಸರ್ಪ ಸಂಸ್ಕಾರ ಸೇವೆಯನ್ನು ಬಂದ್ ಮಾಡಲಾಗಿದೆ. ಈ ಮಾಹಿತಿ ಅರಿಯದೆ ದೂರದ ಊರುಗಳಿಂದ ಪ್ರಸಿದ್ಧ ನಾಗಕ್ಷೇತ್ರವಾಗಿರುವ ಕುಕ್ಕೆಗೆ ಬಂದಿರುವ ಭಕ್ತರು, ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಆದೇಶ ಪಾಲಿಸುವುದು ಅನಿವಾರ್ಯ ಭಕ್ತರು ಸಹಕರಿಸಬೇಕಾಗಿ ದೇವಾಲಯದ ಆಡಳಿತ ಮಂಡಳಿ ಪ್ರಮುಖರು ತಿಳಿಸಿದರು.