ವಿಟ್ಲ : ವಿಟ್ಲ ಪಟ್ಟಣ ಪಂಚಾಯಿತಿನ ಎರಡನೇ ಅವಧಿಯ ಉಳಿದ ತಿಂಗಳುಗಳಿಗೆ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಎರಡನೇ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತ ದಮಯಂತಿ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಂಡಿದ್ದರಿಂದ ದಮಯಂತಿ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ಚುನಾವಣೆ ನಡೆಸಿದ್ದು, ಬಿಜೆಪಿ ಸದಸ್ಯೆ ಚಂದ್ರಕಾಂತಿ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಉಷಾಕೃಷ್ಣಪ್ಪ, ಸದಸ್ಯರಾದ ಅರುಣ್ ವಿಟ್ಲ, ರಾಮ್ ದಾಸ್ ಶೆಣೈ, ರವಿಪ್ರಕಾಶ್, ಶ್ರೀಕೃಷ್ಣ, ಲೋಕನಾಥ ಶೆಟ್ಟಿ, ಜಯಂತ, ಇಂದಿರಾ ಅಡ್ಯಾಳಿ, ಸಂಧ್ಯಾ ಮೋಹನ್, ಗೀತಾಪುರಂದರ, ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ಉಪತಹಶೀಲ್ದಾರ್ ಕೆ ಸಿದ್ದರಾಜು, ಕಂದಾಯ ನಿರೀಕ್ಷಕ ದಿವಾಕರ, ಗ್ರಾಮಕರಣಿಕ ಪ್ರಕಾಶ್, ಸಿಬ್ಬಂದಿಗಳಾದ ನಾರಾಯಣ ಗೌಡ, ಮತ್ತು ಕಾರ್ತೀಕ್, ಚಂದ್ರಶೇಖರ ವರ್ಮ, ರತ್ನ ಉಪಸ್ಥಿತರಿದ್ದರು.