ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು ಫೆಬ್ರವರಿ 9,10 ರಂದು ಮಂಗಳೂರಿನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಇಲಾಖೆಗೆ ಸಂಬಂಧಿಸಿದ ನೈಜ, ವೈಯಕ್ತಿಕ ಅಥವಾ ಸಾರ್ವಜನಿಕ ಕುಂದುಕೊರತೆಗಳಿರುವ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ನಾಗರೀಕರು ನಾಳೆ (09) ಸಂಜೆ 7 ಗಂಟೆಗೆ ಐಜಿಪಿ ಕಚೇರಿಯಲ್ಲಿ ಮತ್ತು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ನಾಗರೀಕರು 10 ರಂದು ಬೆಳಿಗ್ಗೆ 11 ಗಂಟೆಗೆ ನನ್ನನ್ನು ಭೇಟಿ ಮಾಡಬಹುದು ಎಂದು ಹೇಳಿದ್ದಾರೆ.
ಸಾಮಾನ್ಯ ನಾಗರಿಕರ ಸೇವೆ ನಮ್ಮ ಧ್ಯೇಯವಾಗಿದೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ ಎಂದು ಟ್ವೀಟ್ ಮೂಲಕ ಅವರು ಮನವಿ ಮಾಡಿದ್ದಾರೆ.



























