ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಭಾರೀ ಸ್ಪಂದನೆ ವ್ಯಕ್ತವಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಸಾರ್ವಜನಿಕರೊಂದಿಗಿನ ಸಭೆ ಇನ್ನಷ್ಟೆ ಆರಂಭವಾಗಬೇಕಿದೆ. ಎಡಿಜಿಪಿಯವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಮುಖರ ಅಹವಾಲು ಆಲಿಸುತ್ತಿದ್ದು ಇತ್ತೀಚೆಗೆ ನಗರದಲ್ಲಿ ನಡೆದ ಮೆಡಿಕಲ್ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣದ ತನಿಖೆ ಬಗ್ಗೆ ಅಹವಾಲು ಮೆಡಿಕಲ್ ಕಾಲೇಜಿನವರು ಅಹವಾಲು ಸಲ್ಲಿಸಿದ್ದಾರೆ. ಉಳಿದಂತೆ ಹಿರಿಯ ನಾಗರಿಕರು, ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲು ಸಲ್ಲಿಕೆಗೆ ಆಗಮಿಸಿದ್ದಾರೆ..