ಬೆಳ್ತಂಗಡಿ : ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾಪತ್ತೆಯಾಗಿರುವ ವಿದ್ಯಾರ್ಥಿನಿಯನ್ನು ದೀಕ್ಷಿತಾ (18) ಎಂದು ಗುರುತಿಸಲಾಗಿದೆ.
ಇವರು ಉಜಿರೆ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ಈಕೆ ಹಾಸ್ಟೆಲ್ ನಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಮನೆಗೆಂದು ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಗಳು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಕೆಯ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ..