ಪುತ್ತೂರು : ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಗುರುವಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಲಿದೆ.
ಈ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಕೂಡ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗುತ್ತಿದೆ.ನಗರಸಭೆ ವಾಹನದಲ್ಲಿ ಮೈಕ್ ಗಳ ಮೂಲಕ ಬಂದ್ ಮಾಡಲು ಸೂಚನೆಯನ್ನು ನೀಡುತ್ತಿದೆ. ತುರ್ತು ಸೇವೆಗಳು ಮಾತ್ರ ಲಭ್ಯವಿದ್ದು, ಬೇರೆಯದ್ದೆಲ್ಲಾ ಸಂಪೂರ್ಣವಾಗಿ ಬಂದ್ ಆಗಿದೆ.