ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ತಜ್ಞರು, ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಶುಕ್ರವಾರ ನಡೆಯಲಿರುವ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸುತ್ತಿರುವೆ. ಹೀಗಾಗಿ ನಾನು ಪಶ್ಚಿಮ ಬಂಗಾಳಕ್ಕೆ ಹೋಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಅಂಗವಾಗಿ ಇಂದು ನಾಲ್ಕು ಚುನಾವಣಾ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಬೇಕಿತ್ತು. ಇನ್ನೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಆರನೇ ಹಂತದ ಮತದಾನ ಗುರುವಾರ ಪೂರ್ಣಗೊಂಡಿದ್ದು, ಇದೇ ಏ. 26 ಮತ್ತು 29ರಂದು ಏಳು ಮತ್ತು ಎಂಟನೇ ಹಂತದ ಮತದಾನ ನಡೆಯಲಿದೆ.