ಬಂಟ್ವಾಳ : ಲಾರಿ, ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ಸಂಭವಿಸಿದೆ.
ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಮತ್ತು ಮಾಣಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ಕಳೆದು ಟಾಟಾ ಏಸ್ ಗೆ ಢಿಕ್ಕಿಯಾಗಿದೆ. ಈ ಘಟನೆಯಿಂದ ಟಾಟಾ ಏಸ್ ಚಾಲಕ ಹಾಗೂ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಸ್ಥಳದಲ್ಲಿ ಕೆಲವು ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.