ಪುತ್ತೂರು: ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ‘ಜನ ಸಂವಾದ’ ಕರ್ನಾಟಕದ ಇಂದಿನ ಅಗತ್ಯಗಳು ಕಾರ್ಯಕ್ರಮ ಫೆ.26 ರಂದು ಪುತ್ತೂರಿನ ಜೈನ ಭವನದಲ್ಲಿ ನಡೆಯಲಿದೆ.
ಜನ ಸಂವಾದ ಕಾರ್ಯಕ್ರಮಕ್ಕೆ ನಿವೃತ್ತ ಲೋಕಾಯುಕ್ತರಾದ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಯವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..


























