ಮಂಗಳೂರು : ಹಂಪನಕಟ್ಟೆಯ ಅಲೋಶಿಯಸ್ ಕಾಲೇಜ್ ರೋಡ್‌ನಲ್ಲಿರುವ ಕ್ಯಾಥೊಲಿಕ್ ಕೊ-ಆಪರೇಟಿವ್ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಬ್ಯಾಂಕ್‌ನ ಸರ್ವರ್ ಕೊಠಡಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಏನು ಎಂದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.