ಮಂಗಳೂರು: ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ.
ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.
ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..