ಪುತ್ತೂರು: ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಾ.8 ಹಾಗೂ 9ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಹಾಗೂ ಚಪ್ಪರ ಮುಹೂರ್ತ ಮಾ.1 ರಂದು ನಡೆಯಿತು.

ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಗೊನೆ ಮುಹೂರ್ತ
ನೆರವೇರಿತು.
ದೇವಸ್ಥಾನದ ಅರ್ಚಕ ನಾಗೇಶ್ ಕುದ್ರೆತ್ತಾಯ ಗೊನೆ ಮುಹೂರ್ತ ಹಾಗೂ ಚಪ್ಪರ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿ ಅನಿಲ್ ಕುಮಾರ್ ಕಣ್ಣಾರ್ನೂಜಿ, ಉಪಾಧ್ಯಕ್ಷ ಸೇಸಪ್ಪ ಶೆಟ್ಟಿ ಪೊನೋನಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸದಾಶಿವ ಶೆಟ್ಟಿ ಪಟ್ಟೆ, ರಾಮಣ್ಣ ಗೌಡ ತೌಡಿಂಜ, ರಜನಿ ಕಡ್ಯ, ಭವಾನಿ ರಮೇಶ್ ಗೌಡ ಪಜಿಮಣ್ಣು, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಬಾಲಕೃಷ್ಣ ಶೆಟ್ಟಿ ಪಂಜಳ, ಬಾಲಚಂದ್ರ ಗೌಡ ಕಡ್ಯ, ಬಾಲಕೃಷ್ಣ ಕಣ್ಣಾರಾಯ, ದೇವಸ್ಥಾನದ ಸಿಬ್ಬಂದಿ ಪ್ರಸಾದ್ ಬೈಪಾಡಿತ್ತಾಯ ಸಹಿತ ಹಲವು ಮಂದಿ ಭಕ್ತಾಧಿಗಳು ಉಪಸ್ಥಿತರಿದ್ದರು.





























