ಪುತ್ತೂರು: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು ಹಾಗೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಾಲ್ಮರ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾ.5 ರಂದು ಬೆಳಿಗ್ಗೆ 9 ರಿಂದ 1.30ರ ವರೆಗೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ.
ವೈದ್ಯಕೀಯ ಶಾಸ್ತ್ರ ವಿಭಾಗ, ಮಕ್ಕಳ ವಿಭಾಗ, ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗ, ಮೂಳೆ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಕಿವಿ-ಮೂಗು ಗಂಟಲು ವಿಭಾಗ, ಕಣ್ಣಿನ ಚಿಕಿತ್ಸಾ ವಿಭಾಗ, ಮಧುಮೇಹ ತಪಾಸಣೆ , ಉಚಿತ ಔಷಧಿಗಳು ವಿಭಾಗದಲ್ಲಿ ತಪಾಸಣೆ ನಡೆಯಲಿದೆ.
ಶಿಬಿರದಲ್ಲಿ ಜನರಲ್ ಮೆಡಿಸಿನ್, ಶ್ವಾಸಕೋಶ, ಅಸ್ತಮಾ ಸಂಬಂಧಿ ಕಾಯಿಲೆಗಳು, ಕ್ಯಾನ್ಸರ್ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಮಕ್ಕಳ ಶಸ್ತ್ರ ಚಿಕಿತ್ಸೆ, ಎಲುಬು ಮತ್ತು ಕೀಲು ವಿಭಾಗ, ಬೆನ್ನು ಮೂಳೆ ಚಿಕಿತ್ಸೆ, ಮೊಣಕಾಲು ಚಿಕಿತ್ಸೆ, ಅಪೆಂಡಿಕ್ಸ್, ಅಲ್ಸರ್, ಹರ್ನಿಯಾ, ಮೂಲವ್ಯಾಧಿ, ಗರ್ಭಕೋಶದ ಗಡ್ಡೆ, ಕಿವಿ, ಮೂಗು, ಗಂಟಲು, ಥೈರಾಯಿಡ್, ಸಂಧಿವಾತ, ಉದರ ಸಂಬಂಧಿ ಕಾಯಿಲೆಗಳು, ವೇರಿಕೋಸ್ ವೇನ್, ನರ ಸಂಬಂಧಿ ಚಿಕಿತ್ಸೆಗಳ ತಪಾಸಣೆ, ಕಣ್ಣಿನ ತಪಾಸಣೆ ಮಾಡಲಾಗುವುದು ಹಾಗೂ ಶಿಬಿರದಲ್ಲಿ ಔಷಧಿಗಳು ಉಚಿತವಾಗಿ ನೀಡಲಾಗುವುದು ಎಂದು ರಾಬಿನ್ ತಾವ್ರೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
