ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ಗ್ರಾಮಾಂತರ ಠಾಣೆ, ಬಂಟ್ವಾಳ ನಗರ ಠಾಣೆ, ಸುಳ್ಯ ಠಾಣೆ ಮತ್ತು ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಸಂಬಂಧಪಟ್ಟ ಠಾಣಾಧಿಕಾರಿಗಳು ದಾಳಿ ನಡೆಸಿ ಮದ್ಯ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿ ನಡೆಸಿದ ಅಧಿಕಾರಿಗಳು ಅಂದಾಜು ರೂ 12,786/- ಮೌಲ್ಯದ 39.79 ಲೀಟರ್ ಮದ್ಯದ ಬಾಟಲಿಗಳನ್ನು ಜಪ್ತಿ ಪಡಿಸಿಕೊಂಡು 4 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅವರುಗಳ ವಿರುದ್ದ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕನ್ಯಾನ ಗ್ರಾಮ ಕಣಿಯೂರು ನಿವಾಸಿ ಗಂಗಾಧರ(50) ರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 31/2023ರಂತೆ ಪ್ರಕರಣ ದಾಖಲಾಗಿದೆ.
ಬಡಗಬೆಳ್ಳೂರು ನೆಲ್ಲಿಮಾರು ನಿವಾಸಿ ಯಾದವ ಕುಲಾಲ್ (56) ರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ 20/2023 ರಂತೆ ಪ್ರಕರಣ ದಾಖಲಾಗಿದೆ.
ತೊಡಿಕಾನ ಅಡ್ಯಡ್ಕ ನಿವಾಸಿ ಅಣ್ಣ ದೊರೈ (52)ರ ವಿರುದ್ಧ ಸುಳ್ಯ ಠಾಣೆಯಲ್ಲಿ ಅ.ಕ್ರ 19/2023 ರಂತೆ ಪ್ರಕರಣ ದಾಖಲಾಗಿದೆ.
ಕಳ್ಳಿಗೆ ಗ್ರಾಮ,ಜಾರಂದಗುಡ್ಡೆ ನಿವಾಸಿ ಅಶೋಕ (42)ರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 14/2023 ರಂತೆ ಪ್ರಕರಣ ದಾಖಲಾಗಿದೆ.



























