ಪುತ್ತೂರು: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿದ ಘಟನೆ ಕೌಡಿಚ್ಚಾರ್ ನಲ್ಲಿ ನಡೆದಿದೆ.
ಮೃತರನ್ನು ಕಾವು ಮದ್ಲದ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.

ಘಟನೆಲ್ಲಿ ಬೈಕ್ ಸವಾರ ಉಬರಡ್ಕ ಮೂಲದ ಗುರುಪ್ರಸಾದ್ ರವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ವೇಳೆ ಅದೇ ದಾರಿಯಲ್ಲಿ ತೆರಳುತ್ತಿದ್ದ ಅರಿಯಡ್ಕ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಸಚಿನ್ ಪಾಪೆಮಜಲು, ವಕೀಲರಾದ ಚಿನ್ಮಯ್ ಈಶ್ವರಮಂಗಲ, ಹಿಂದೂ ಜಾಗರಣ ವೇದಿಕೆ ಕೌಡಿಚ್ಚಾರು ಘಟಕದ ಸಂಚಾಲಕ ಜಗದೀಶ್ ರವರು ಗಮನಿಸಿ ಕೂಡಲೇ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದರು ಆದರೆ ನಾರಾಯಣ ನಾಯ್ಕ್ ರವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತವಾಗಿ ರಸ್ತೆಯಲ್ಲಿ ಬಿದ್ದವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ..