ಲಿಟ್ಲ್ ಫ್ಲವರ್ ಶಾಲೆ ದರ್ಬೆ, ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ “ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಬಗ್ಗೆ ಜಾಗೃತಿ” ಕಾರ್ಯಕ್ರಮವು ಶಾಲಾ ಮುಖ್ಯ ಶಿಕ್ಷಕಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಶಾಲಾ ಶಿಕ್ಷಕರಾದ ಬಾಲಕೃಷ್ಣ ರೈ ಪೊ ಪೊರ್ದಾಲ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಶಿಕ್ಷಕಿಯರಾದ ವಿನೀತಾ ಪಿರೇರ, ಜೋಸ್ಲಿನ್ ಪಾಯಸ್ ಹಾಗೂ ನಳಿನಾಕ್ಷಿ ಉಪಸ್ಥಿತರಿದ್ದರು.