ಕಡಬ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್ ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ಸುಬ್ರಹ್ಮಣ್ಯದಲ್ಲಿ ನಡೆದಿದೆ
ಮೃತರನ್ನು ಸುಬ್ರಹ್ಮಣ್ಯ ನಿವಾಸಿ ಪೈಂಟರ್ ರಮೇಶ್ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯದ ಇಂಜಾಡಿ ಸಮೀಪ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.